ಬಕ್ರೀದ್ ಹಬ್ಬ – ಸರಕಾರದ ಮಾರ್ಗಸೂಚಿ ಬಿಡುಗಡೆ…

ಬೆಂಗಳೂರು: ಉಡುಪಿ, ದಕ್ಷಿಣ ಕನ್ನಡ ಮತ್ತು ಕೊಡಗು ಜಿಲ್ಲೆಗಳಲ್ಲಿ ಜುಲೈ 31 ರಂದು ಬಕ್ರೀದ್ ಹಬ್ಬವನ್ನು ಆಚರಿಸಲಾಗುತ್ತದೆ. ಉಳಿದೆಡೆ ಆ. 1 ರಂದು ಆಚರಿಸಲಾಗುತ್ತದೆ. ಹಬ್ಬದ ಆಚರಣೆಗೆ ರಾಜ್ಯ ಸರ್ಕಾರದ ಮಾರ್ಗಸೂಚಿಗಳು ಹೀಗಿವೆ.

ಪ್ರಾರ್ಥನಾ ಸ್ಥಳಗಳಲ್ಲಿ ​ ಕಡ್ಡಾಯವಾಗಿ ಮಾಸ್ಕ ಹಾಕಬೇಕು.
60 ವರ್ಷಕ್ಕಿಂತ ಮೇಲ್ಪಟ್ಟ ವ್ಯಕ್ತಿಗಳು ಹಾಗೂ 10 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳು ಮನೆಯಲ್ಲಿ ಪ್ರಾರ್ಥನೆ ಮಾಡುವುದು.
ನಮಾಜ್ ನಿರ್ವಹಿಸುವವರ ಮಧ್ಯೆ ಕನಿಷ್ಠ 6 ಅಡಿ ಅಂತರ ಕಾಯ್ದುಕೊಳ್ಳುವುದು.
ಮಸೀದಿಗಳನ್ನು ಪ್ರವೇಶಿಸುವ ಮೊದಲು ದೇಹದ ತಾಪಮಾನವನ್ನು ತಪಾಸಣೆ ಮಾಡುವುದು.
ಕೈಗಳನ್ನು ಸೋಪು / ಸ್ಯಾನಿಟೈಜರ್​ನಿಂದ ಶುಚಿಗೊಳಿಸುವುದು.
ಮಸೀದಿಗಳಲ್ಲಿರುವ ಧಾರ್ಮಿಕ ಗ್ರಂಥಗಳನ್ನು ಮುಟ್ಟುವಂತಿಲ್ಲ.
ತಮ್ಮ ತಮ್ಮ ಮನೆಗಳಿಂದ ಮುಸಲ್ಲಾವನ್ನು(ಜಾಯನಮಾಜ್) ಕಡ್ಡಾಯವಾಗಿ ತರುವುದು.
ಹಸ್ತಲಾಘವ ಮತ್ತು ಆಲಿಂಗನ ಮಾಡದಿರಲು ಸೂಚಿಸುವುದು.
ಅಪರಿಚಿತರು ಪ್ರಾರ್ಥನೆ ಸಲ್ಲಿಸಲು ಮಸೀದಿಗೆ ಬಂದಲ್ಲಿ ಅವರ ಬಗ್ಗೆ ವಿಶೇಷ ಗಮನ ಹರಿಸುವುದು.
ಈದ್ಗಾಹ್​ಗಳಲ್ಲಿ ಸಾಮೂಹಿಕ ಪ್ರಾರ್ಥನೆ ನಿರ್ಬಂಧ.
ಮಸೀದಿಗಳಲ್ಲಿ ಗರಿಷ್ಟ 50 ಜನರು ಮೀರದಂತೆ ಸಾಮೂಹಿಕ ಪ್ರಾರ್ಥನೆ ನಿರ್ವಹಿಸಬಹುದು.
5 ಹೊತ್ತಿನ ನಮಾಜ್ ನಿರ್ಬಂಧ.
ಮಸೀದಿ ಹೊರತುಪಡಿಸಿ ಸಭಾಂಗಣ, ಸಮುದಾಯ ಭವನ, ಶಾದಿ ಮಹಲ್​ ಮತ್ತಿತರ ಜಾಗಗಳಲ್ಲಿ ಸಾಮೂಹಿಕ ಪ್ರಾರ್ಥನೆ ಆಯೋಜಿಸುವಂತಿಲ್ಲ.

Sponsors

Related Articles

Leave a Reply

Your email address will not be published. Required fields are marked *

Back to top button