ವಿವೇಕಾನಂದ ಇಂಜಿನಿಯರಿಂಗ್ ಕಾಲೇಜು – ರೊಬೊಟಿಕ್ಸ್ ಪ್ರಯೋಗಾಲಯ ಉದ್ಘಾಟನೆ…

ಪುತ್ತೂರು: ತಂತ್ರಜ್ಞಾನಗಳು ದಿನದಿಂದ ದಿನಕ್ಕೆ ಬದಲಾಗುತ್ತಿದ್ದು, ಅದರಂತೆ ನಾವೂ ಕೂಡಾ ಅದಕ್ಕೆ ಹೊಂದಿಕೊಳ್ಳಬೇಕು. ಇಲ್ಲವಾದರೆ ನಾವು ಹಿಂದುಳಿಯುವ ಸಾಧ್ಯತೆಯಿದೆ ಎಂದು ಪುತ್ತೂರು ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನ ಆಡಳಿತ ಮಂಡಳಿಯ ನಿರ್ದೇಶಕ ರವಿಕೃಷ್ಣ.ಡಿ.ಕಲ್ಲಾಜೆ ಹೇಳಿದರು.
ಅವರು ಪುತ್ತೂರು ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನ ಇಲೆಕ್ಟ್ರಾನಿಕ್ಸ್ ಎಂಡ್ ಕಮ್ಯುನಿಕೇಶನ್ ವಿಭಾಗದ ಆಶ್ರಯದಲ್ಲಿ ನಿರ್ಮಿಸಲಾದ ನೂತನ ರೋಬೋಟಿಕ್ಸ್ ಪ್ರಯೋಗಾಲಯವನ್ನು ದೀಪ ಬೆಳಗಿಸಿ ಉದ್ಘಾಟಿಸಿ ಮಾತನಾಡಿದರು.
ಇಂಡಸ್ಟ್ರಿಗಳು ಬಯಸುವ ತಂತ್ರಜ್ಞಾನಕ್ಕೂ ಕಲಿಯುವ ಪಠ್ಯಕ್ರಮಕ್ಕೂ ತುಂಬಾ ವ್ಯತ್ಯಾಸವಿದೆ. ಹೀಗಾಗಿ ನೂತನ ತಂತ್ರಜ್ಞಾನಗಳನ್ನು ಕಲಿತು ಸರ್ವ ಸನ್ನದ್ಧರಾಗಬೇಕಾದ ಅನಿವಾರ್ಯತೆ ಎದುರಾಗಿದೆ. ಇದಕ್ಕಾಗಿ ಇಂತಹ ಪ್ರಯೋಗಾಲಯಗಳು ಸಹಕಾರಿಯಾಗುತ್ತವೆ ಎಂದರು.
ಕಾಲೇಜಿನ ಪ್ರಾಂಶುಪಾಲ ಡಾ.ಮಹೇಶ್‍ಪ್ರಸನ್ನ.ಕೆ ಮಾತನಾಡಿ ವಿದ್ಯಾರ್ಥಿಗಳ ಅಭಿವೃದ್ಧಿಗೆ ಪೂರಕವಾಗಿ ಕಾಲೇಜು ಸಾಕಷ್ಟು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ಪಾಠದ ಜತೆಯಲ್ಲಿ ಪಠ್ಯೇತರ ಚಟುವಟಿಕೆಗಳಿಗೆ ಸಮಾನ ಅವಕಾಶವನ್ನು ನೀಡಲಾಗುತ್ತದೆ ಎಂದರು. ಕಾಲೇಜಿನಿಂದ ಹೊರ ಹೋಗುವ ಇಂಜಿನಿಯರಿಂಗ್ ಪದವೀಧರರು ಸಮಾಜದಲ್ಲಿ ಎದುರಾಗುವ ಸವಾಲುಗಳನ್ನು ಸಮರ್ಥವಾಗಿ ಎದುರಿಸುವಂತೆ ಅವರಿಗೆ ಸೂಕ್ತ ಮಾರ್ಗದರ್ಶನವನ್ನು ನೀಡಲಾಗುತ್ತದೆ ಎಂದರು.
ನೂತನ ಪ್ರಯೋಗಾಲಯದ ಸಂಯೋಜಕ ಪ್ರೊ.ಶಿವಪ್ರಸಾದ್ ಇದರ ಕಾರ್ಯವೈಖರಿಯ ಬಗ್ಗೆ ಮತ್ತು ಇಲ್ಲಿರುವ ಉಪಕರಣಗಳ ಬಗ್ಗೆ ಮಾಹಿತಿ ನೀಡಿದರು.
ಕಾಲೇಜಿನ ವಿವಿದ ವಿಭಾಗಗಳ ಮುಖ್ಯಸ್ಥರು, ಉಪನ್ಯಾಸಕರು ಮತ್ತು ಸೀಮಿತ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಹಾಜರಿದ್ದರು.
ಇಲೆಕ್ಟ್ರಾನಿಕ್ಸ್ ಎಂಡ್ ಕಮ್ಯುನಿಕೇಶನ್ ವಿಭಾಗ ಮುಖ್ಯಸ್ಥ ಪ್ರೊ.ಶ್ರೀಕಾಂತ್ ರಾವ್ ಸ್ವಾಗತಿಸಿ, ವಂದನಾರ್ಪನೆಗೈದರು.

Sponsors

Related Articles

Leave a Reply

Your email address will not be published. Required fields are marked *

Back to top button