ಅಂತಿಮ ವರ್ಷದ ಪರೀಕ್ಷೆ – ಉತ್ತಮ ಫಲಿತಾಂಶ ದಾಖಲಿಸಿದ ವಿವೇಕಾನಂದ ಇಂಜಿನಿಯರಿಂಗ್ ಕಾಲೇಜು…

ಪುತ್ತೂರು: ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯವು ಇಂಜಿನಿಯರಿಂಗ್ ವಿಭಾಗದ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಕಳೆದ ಆಗಸ್ಟ್ ತಿಂಗಳಿನಲ್ಲಿ ನಡೆಸಿದ ಪರೀಕ್ಷೆಗಳ ಫಲಿತಾಂಶವು ಪ್ರಕಟಗೊಂಡಿದ್ದು ಪುತ್ತೂರಿನ ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳು ಉತ್ತಮ ಸಾಧನೆಯನ್ನು ಮಾಡಿದ್ದಾರೆ.
ಪರೀಕ್ಷೆಗೆ ಹಾಜರಾದ 398 ವಿದ್ಯಾರ್ಥಿಗಳಲ್ಲಿ 378 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ ಮತ್ತು 12 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ್ದಾರೆ.
ವಿಭಾಗವಾರು ಫಲಿತಾಂಶಗಳ ಪೈಕಿ ಕಂಪ್ಯೂಟರ್ ಸೈನ್ಸ್-100%, ಮೆಕ್ಯಾನಿಕಲ್ ಇಂಜಿನಿಯರಿಂಗ್ ವಿಭಾಗ-99%, ಸಿವಿಲ್ ಇಂಜಿನಿಯರಿಂಗ್ ವಿಭಾಗ-98% ಮತ್ತು ಇಲೆಕ್ಟ್ರಾನಿಕ್ಸ್ ಎಂಡ್ ಕಮ್ಯುನಿಕೇಶನ್ ವಿಭಾಗವು 93% ಫಲಿತಾಂಶವನ್ನು ದಾಖಲಿಸಿವೆ.
ಕೋವಿಡ್ ಸಂದರ್ಭದ ನಡುವೆಯೂ ಆನ್ ಲೈನ್ ತರಗತಿಗಳಿಗೆ ಹಾಜರಾಗಿ ವಿದ್ಯಾರ್ಥಿಗಳು ಪರೀಕ್ಷೆಯನ್ನು ಸಮರ್ಥವಾಗಿ ಎದುರಿಸಿ ಉತ್ತಮ ಫಲಿತಾಂಶವನ್ನು ಪಡೆದುಕೊಂಡಿದ್ದಾರೆ. ಅವರ ಈ ಸಾಧನೆಯನ್ನು ಶ್ಲಾಘಿಸುತ್ತೇವೆ ಎಂದು ಪ್ರಾಂಶುಪಾಲ ಡಾ.ಮಹೇಶ್‍ಪ್ರಸನ್ನ.ಕೆ ತಿಳಿಸಿದ್ದಾರೆ.

Sponsors

Related Articles

Leave a Reply

Your email address will not be published. Required fields are marked *

Back to top button