ಸೋಮವಾರ – ದ.ಕ 153 ,ಉಡುಪಿ 126 ಹಾಗೂ ರಾಜ್ಯದಲ್ಲಿ 4752 ಕೊರೊನ ಪಾಸಿಟಿವ್ ಪತ್ತೆ…

ಮಂಗಳೂರು: ಇಂದು(ಸೋಮವಾರ ) ದ.ಕ ಜಿಲ್ಲೆಯಲ್ಲಿ 153 ,ಉಡುಪಿ ಜಿಲ್ಲೆಯಲ್ಲಿ 126 ಹಾಗೂ ರಾಜ್ಯದಲ್ಲಿ 4752 ಕೊರೊನ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದೆ.
ದ.ಕ ಜಿಲ್ಲೆಯಲ್ಲಿ ಇಂದು 153 ಹೊಸ ಕೋವಿಡ್ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ.ಈ ಮೂಲಕ ಸೋಂಕಿತರ ಸಂಖ್ಯೆ 6168 ಕ್ಕೆ ಏರಿಕೆಯಾಗಿದೆ. 124 ಮಂದಿ ಗುಣಮುಖರಾಗಿದ್ದಾರೆ. ಜಿಲ್ಲೆಯಲ್ಲಿ ಇಂದು 7 ಮಂದಿ ಕೊರೊನದಿಂದಾಗಿ ಮೃತಪಟ್ಟಿದ್ದಾರೆ.ಮಂಗಳೂರು ತಾಲೂಕಿನಲ್ಲಿ 119 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. ಬಂಟ್ವಾಳದಲ್ಲಿ 11, ಬೆಳ್ತಂಗಡಿಯಲ್ಲಿ 6, ಪುತ್ತೂರು 4, ಸುಳ್ಯ ತಾಲೂಕಿನಲ್ಲಿ ಒಬ್ಬರಲ್ಲಿ ಸೋಂಕು ಪತ್ತೆಯಾಗಿದೆ. ಹೊರ ಜಿಲ್ಲೆಯ 12 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ.
ಉಡುಪಿ ಜಿಲ್ಲೆಯಲ್ಲಿ ಇಂದು 126 ಹೊಸ ಕೋವಿಡ್ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 4800 ಕ್ಕೆ ಏರಿಕೆಯಾಗಿದೆ.ಇಂದು ಲಭಿಸಿದ ವರದಿಗಳಲ್ಲಿ 1086 ವರದಿಗಳು ನೆಗೆಟಿವ್‌ ಆಗಿದೆ.
ಇಂದು ಬೆಂಗಳೂರು ನಗರವೊಂದರಲ್ಲೆ 1497 ಹೊಸ ಪ್ರಕರಣಗಳು ವರದಿಯಾಗಿದ್ದು, ರಾಜ್ಯದಲ್ಲಿ ಒಟ್ಟು 4752 ಮಂದಿಗೆ ಪಾಸಿಟಿವ್ ದೃಢಪಟ್ಟಿದೆ. ಇದರಿಂದ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 1,39, 571ಕ್ಕೇರಿಕೆಯಾಗಿದೆ. ಕಳೆದ 24 ಗಂಟೆಗಳಲ್ಲಿ 2693 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ.ಸೋಮವಾರ 98 ಮಂದಿ ಮಹಾಮಾರಿಗೆ ಬಲಿಯಾಗಿದ್ದಾರೆ. ಇದರೊಂದಿಗೆ ರಾಜ್ಯದಲ್ಲಿ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 2594ಕ್ಕೆ ಏರಿಕೆಯಾಗಿದೆ.

Sponsors

Related Articles

Leave a Reply

Your email address will not be published. Required fields are marked *

Back to top button