ವಿವೇಕಾನಂದ ಎಂಜಿನಿಯರಿಂಗ್ ಕಾಲೇಜು – ಅಂತರ್ ವಿಶ್ವವಿದ್ಯಾನಿಲಯ ಪುರುಷರ ಕ್ರೀಡಾಕೂಟಕ್ಕೆ ಆಯ್ಕೆ…

ಪುತ್ತೂರು: ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಇಬ್ಬರು ವಿದ್ಯಾರ್ಥಿಗಳು ಅಖಿಲ ಭಾರತೀಯ ಅಂತರ್ ವಿಶ್ವವಿದ್ಯಾನಿಲಯ ಪುರುಷರ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ.
ತೃತೀಯ ವರ್ಷದ ಕಂಪ್ಯೂಟರ್ ಸೈನ್ಸ್ ವಿಭಾಗದ ವಿದ್ಯಾರ್ಥಿ ಲೋಹಿತ್.ಆರ್.ಎನ್ 100ಮೀ ಹಾಗೂ 200 ಮೀಟರ್ ಓಟದ ವಿಭಾಗದಲ್ಲಿ ಮತ್ತು ದ್ವಿತೀಯ ವರ್ಷದ ಸಿವಿಲ್ ವಿಭಾಗದ ವಿದ್ಯಾರ್ಥಿ ಕೀರ್ತಿರಾಜ್.ಕೆ.ಎಸ್ ಜಾವೆಲಿನ್ ಥ್ರೋ ವಿಭಾಗದಲ್ಲಿ ರಾಷ್ಟ್ರಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.
ಇವರು ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯದ ಆವರಣದಲ್ಲಿ ನಡೆದ ಆಯ್ಕೆ ಶಿಬಿರದಲ್ಲಿ ಅತ್ಯುತ್ತಮ ಸಾಧನೆಯನ್ನು ಮಾಡಿ ವಿಶ್ವವಿದ್ಯಾನಿಲಯ ತಂಡದಲ್ಲಿ ಸ್ಥಾನವನ್ನು ಪಡೆದುಕೊಂಡಿದ್ದಾರೆ. ಜನವರಿ 4 ರಿಂದ 7ರವರೆಗೆ ಮಂಗಳೂರು ವಿಶ್ವವಿದ್ಯಾನಿಲಯದ ಆಶ್ರಯದಲ್ಲಿ ಮುಡಬಿದಿರೆಯ ಆಳ್ವಾಸ್ ಶಿಕ್ಷಣ ಸಂಸ್ಥೆಯಲ್ಲಿ ನಡೆಯುವ ರಾಷ್ಟ್ರ ಮಟ್ಟದ ಅಂತರ್ ವಿಶ್ವವಿದ್ಯಾನಿಲಯ ಕ್ರೀಡಾಕೂಟದಲ್ಲಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯ ತಂಡವನ್ನು ಇವರು ಪ್ರತಿನಿಧಿಸಲಿದ್ದಾರೆ. ಇವರಿಗೆ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಬಾಲಚಂದ್ರ ಗೌಡ ಭಾರ್ತಿಕುಮೇರು ಮಾರ್ಗದರ್ಶನವನ್ನು ನೀಡಿದ್ದಾರೆ ಎಂದು ಪ್ರಾಂಶುಪಾಲ ಡಾ.ಮಹೇಶ್‍ಪ್ರಸನ್ನ.ಕೆ ತಿಳಿಸಿದ್ದಾರೆ.

 

Sponsors

Related Articles

Back to top button