ವಿವೇಕಾನಂದ ಎಂಜಿನಿಯರಿಂಗ್ ಕಾಲೇಜು – ಮೆಶಿನ್ ಲರ್ನಿಂಗ್ ಟೂಲ್ಸ್ ವಿಷಯದ ಕುರಿತು ವಿಚಾರ ಸಂಕಿರಣ…
ಪುತ್ತೂರು: ಆರ್ಟಿಫೀಶಿಯಲ್ ಇಂಟೆಲಿಜೆನ್ಸ್, ಮೆಷಿನ್ ಲರ್ನಿಂಗ್, ಡಾಟಾ ಸೈನ್ಸ್ ಮುಂತಾದ ವಿಭಾಗಗಳು ಒಂದಕ್ಕೊಂದು ಪೂರಕವಾಗಿದ್ದು ಮುಂದಿನ ದಿನಗಳಲ್ಲಿ ಅವಕಾಶಗಳ ಹೆಬ್ಬಾಗಿಲನ್ನೇ ತೆರೆದಿಡಲಿವೆ ಎಂದು ಮಣಿಪಾಲದ ಮಣಿಪಾಲ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ಮಾಹಿತಿ ತಂತ್ರಜ್ಞಾನ ವಿಭಾಗದ ಡಾ.ರಾಘವೇಂದ್ರ.ಎಸ್ ಹೇಳಿದರು.
ಅವರು ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಟೆಕ್ನಾಲಜಿಯ ಶ್ರೀರಾಮ ಸಭಾಭವನದಲ್ಲಿ ಐಇಇಇ ವಿಸಿಇಟಿ ವಿದ್ಯಾರ್ಥಿ ಶಾಖೆಯ ಆಶ್ರಯದಲ್ಲಿ ಮೆಶಿನ್ ಲರ್ನಿಂಗ್ ಟೂಲ್ಸ್ ಎನ್ನುವ ವಿಷಯದ ಕುರಿತು ಏರ್ಪಡಿಸಲಾದ ಎರಡು ದಿನಗಳ ವಿಚಾರ ಸಂಕಿರಣವನ್ನು ಉದ್ಘಾಟಿಸಿ ಮಾತನಾಡಿದರು.
ಭವಿಷ್ಯದ ಎಲ್ಲಾ ಕಾರ್ಯಗಳು ಈ ತಂತ್ರಜ್ಞಾನವನ್ನು ಬಳಸಿಕೊಂಡೇ ನಡೆಯಲಿದ್ದು, ಇದಕ್ಕೆ ಹೆಚ್ಚಿನ ಬೇಡಿಕೆ ಬರುತ್ತದೆ. ಒಂದು ವಿಷಯದ ಬಗ್ಗೆ ವಿಭಿನ್ನವಾಗಿ ಚಿಂತಿಸಿಸುವುದರಿಂದ ವಿವಿಧ ಬಗೆಯ ಫಲಿತಾಂಶವನ್ನು ಪಡೆಯಬಹುದು ಇದು ನೂತನ ಸಂಶೋಧನೆಗಳಿಗೆ ದಾರಿ ಮಾಡಿಕೊಡುತ್ತದೆ ಎಂದು ಅವರು ಹೇಳಿದರು.
ಪ್ರಾಂಶುಪಾಲ ಡಾ.ಮಹೇಶ್ ಪ್ರಸನ್ನ.ಕೆ ಮಾತನಾಡಿ ಕಾಲೇಜಿನ ಐಇಇಇ ವಿಸಿಇಟಿ ವಿದ್ಯಾರ್ಥಿ ಶಾಖೆಯನ್ನು ವಿದ್ಯಾರ್ಥಿಗಳ ಅಭಿವೃದ್ಧಿಗಾಗಿ ಸ್ಥಾಪಿಸಲಾಗಿದ್ದು, ಇದರ ಮೂಲಕ ಹೊಸ ಹೊಸ ಅನ್ವೇಷಣೆಗಳು ನಡೆಯುವಂತಾಗಬೇಕು. ವಿದ್ಯಾರ್ಥಿಗಳಿಗೆ ಜ್ಞಾನಾರ್ಜನೆಯೇ ಮುಖ್ಯ ಗುರಿಯಾಗಬೇಕು. ಹೊಸ ವಿಷಯವನ್ನು ಕಲಿಯುವಲ್ಲಿ ಕೀಳರಿಮೆ ಸಲ್ಲದು ಎಂದರು.
ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಕಾಲೇಜು ಆಡಳಿತ ಮಂಡಳಿಯ ಸಂಚಾಲಕ ಸುಬ್ರಮಣ್ಯ ಭಟ್.ಟಿ.ಎಸ್ ಮಾತನಾಡಿ ಕಲಿಕೆಗೆ ಪೂರಕವಾದ ಮತ್ತು ಕಾರ್ಪೊರೇಟ್ ಸಂಸ್ಥೆಗಳು ಬಯಸುವ ರೀತಿಯಲ್ಲಿ ನೂತನ ವಿಷಯಗಳನ್ನು ಕಲಿಸುವ ನಿಟ್ಟಿನಲ್ಲಿ ಕಾಲೇಜು ಅನೇಕ ಕಾರ್ಯಕ್ರಮಗಳನ್ನು ಸಂಘಟಿಸುತ್ತಿದೆ. ಇದರ ಪ್ರಯೋಜನವನ್ನು ಪಡೆದುಕೊಳ್ಳುವುದು ವಿದ್ಯಾರ್ಥಿಗಳ ಕರ್ತವ್ಯ. ಸಮಾಜಿಕ ಕಳಕಳಿಯೊಂದಿಗೆ ದೇಶದ ಪ್ರಜ್ಞಾವಂತ ನಾಗರಿಕರಾಗುವ ಗುರಿ ನಿಮ್ಮದಾಗಲಿ ಎಂದರು.
ಐಇಇಇ ವಿಸಿಇಟಿ ವಿದ್ಯಾರ್ಥಿ ಶಾಖೆ ಸಲಹೆಗಾರ್ತಿ ಡಾ.ಜೀವಿತಾ.ಬಿ.ಕೆ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಸ್ವಾತಿ.ಬಿ.ಎಸ್ ಸ್ವಾಗತಿಸಿ ಶೋಧನ್ ರೈ ವಂದಿಸಿದರು. ಸಂಕೇತ್ ಕಾರ್ಯಕ್ರಮ ನಿರ್ವಹಿಸಿದರು.