ಸುದ್ದಿ

ವಿವೇಕಾನಂದ ಎಂಜಿನಿಯರಿಂಗ್ ಕಾಲೇಜು – ನವೀಕೃತ ತರಬೇತಿ ಮತ್ತು ಉದ್ಯೋಗ ನೇಮಕಾತಿ ವಿಭಾಗದ ಉದ್ಘಾಟನೆ…

ಪುತ್ತೂರು: ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಮಹತ್ವಾಕಾಂಕ್ಷೆಯ ತರಬೇತಿ ಮತ್ತು ಉದ್ಯೋಗ ನೇಮಕಾತಿ ವಿಭಾಗವನ್ನು ಆಧುನಿಕ ಶೈಲಿಯಲ್ಲಿ ಭವ್ಯವಾಗಿ ನವೀಕರಿಸಲಾಗಿದ್ದು, ಇದರ ಉದ್ಘಾಟನೆಯನ್ನು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ.ಕಲ್ಲಡ್ಕ ಪ್ರಭಾಕರ್ ಭಟ್ ಹಾಗೂ ಬೆಂಗಳೂರಿನ ಸೋನಾ ಗ್ರೂಪ್‍ನ ಅಧ್ಯಕ್ಷ ಹಾಗೂ ಮುಖ್ಯ ಕಾರ್ಯನಿರ್ವಣಾಧಿಕಾರಿ ಯಜ್ಞನಾರಾಯಣ ಕಮ್ಮಾಜೆ ಅವರು ನೆರವೇರಿಸಿದರು.
ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ವಿದ್ಯಾರ್ಥಿಗಳಿಗೆ ವಿಫುಲ ಉದ್ಯೋಗಾವಕಾಶವನ್ನು ಒದಗಿಸಿಕೊಡುವಲ್ಲಿ ಅವಿರತ ಶ್ರಮವಹಿಸಿ ಕೆಲಸ ನಿರ್ವಹಿಸುವ ಈ ವಿಭಾಗವನ್ನು ಅತ್ಯಾಧುನಿಕ ಮೂಲ ಸೌಕರ್ಯಗಳೊಂದಿಗೆ ನವೀಕರಿಸಲಾಗಿದೆ.
ವಿವೇಕಾನಂದ ವಿದ್ಯಾವರ್ಧಕ ಸಂಘದ ಉಪಾಧ್ಯಕ್ಷ ಸತೀಶ್ ರಾವ್.ಪಿ, ಕಾಲೇಜು ಆಡಳಿತ ಮಂಡಳಿಯ ಅಧ್ಯಕ್ಷ ವಿಶ್ವಾಸ್ ಶೆಣೈ, ಸಂಚಾಲಕ ಸುಬ್ರಮಣ್ಯ ಭಟ್.ಟಿ.ಎಸ್, ಕೋಶಾಧಿಕಾರಿ ಮುರಳೀಧರ ಭಟ್, ನಿರ್ದೇಶಕರಾದ ರವಿಕೃಷ್ಣ.ಡಿ.ಕಲ್ಲಾಜೆ, ಸತ್ಯನಾರಾಯಣ.ಬಿ, ಡಾ.ಯಶೋಧಾ ರಾಮಚಂದ್ರ, ಸಂತೋಷ್ ಕುತ್ತಮೊಟ್ಟೆ, ಪ್ರಾಂಶುಪಾಲ ಡಾ.ಮಹೇಶ್ ಪ್ರಸನ್ನ.ಕೆ, ಉದ್ಯೋಗ ಮತ್ತು ನೇಮಕಾತಿ ಅಧಿಕಾರಿಗಳಾದ ಪ್ರೊ.ವಂದನಾ ಶಂಕರ್, ಪ್ರೊ.ಗೈಟನ್ ಲೋಬೋ, ಸಹಾಯಕ ಚಂದಪ್ಪ, ವಿಭಾಗ ಮುಖ್ಯಸ್ಥರು, ಉಪನ್ಯಾಸಕರು ಮತ್ತು ಸಿಬ್ಬಂದಿಗಳು ಈ ಸಂದರ್ಭದಲ್ಲಿ ಹಾಜರಿದ್ದರು.

Related Articles

Back to top button