ಸುದ್ದಿ

ವಿವೇಕಾನಂದ ಎಂಜಿನಿಯರಿಂಗ್ ಕಾಲೇಜು – NBA ಮಾನ್ಯತೆ ನವೀಕರಣ…

ಪುತ್ತೂರು: ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಮೆಕ್ಯಾನಿಕಲ್ ಇಂಜಿನಿಯರಿಂಗ್ ಮತ್ತು ಸಿವಿಲ್ ಇಂಜಿನಿಯರಿಂಗ್ ವಿಭಾಗಕ್ಕೆ ರಾಷ್ಟ್ರೀಯ ಮಾನ್ಯತಾ ಮಂಡಳಿಯು (National Board of Accreditation) ಮೂರು ಶೈಕ್ಷಣಿಕ ವರ್ಷಗಳಿಗೆ ಮಾನ್ಯತೆಯನ್ನು ನವೀಕರಿಸಿದೆ. ಈ ಹಿಂದೆ 2009 ರಿಂದ 2022ರ ವರೆಗೆ ರಾಷ್ಟ್ರೀಯ ಮಾನ್ಯತೆ ದೊರಕಿತ್ತು. ಈಗ ಅದನ್ನು ಮುಂದಿನ ಮೂರು ವರ್ಷಗಳ ಕಾಲಕ್ಕೆ ನವೀಕರಿಸಲಾಗಿದೆ.
ರಾಷ್ಟ್ರೀಯ ಮಾನ್ಯತಾ ಮಂಡಳಿಯು ನವದೆಹಲಿಯ ಅಖಿಲ ಭಾರತೀಯ ತಾಂತ್ರಿಕ ಶಿಕ್ಷಣ ಪರಿಷತ್ತಿನ (AICTE) ಮಾನ್ಯತೆ ಪಡೆದ ಶಿಕ್ಷಣ ಸಂಸ್ಥೆಗಳ ಶೈಕ್ಷಣಿಕ ಗುಣಮಟ್ಟವನ್ನು ಪರೀಕ್ಷಿಸುವ ಜತೆಗೆ ಭಾರತದಲ್ಲಿ ಅಂತಾರಾಷ್ಟ್ರೀಯ ಗುಣಮಟ್ಟದ ತಾಂತ್ರಿಕ ಶಿಕ್ಷಣವನ್ನು ಉತ್ತೇಜಿಸುವ ಸ್ವಾಯತ್ತ ಸಂಸ್ಥೆಯಾಗಿದೆ.
ಅಖಿಲ ಭಾರತೀಯ ತಾಂತ್ರಿಕ ಶಿಕ್ಷಣ ಪರಿಷತ್ತು ನಿಗದಿಪಡಿಸಿದ ರೀತಿಯಲ್ಲಿ ಕಾಲೇಜಿನ ಶೈಕ್ಷಣಿಕ ಸೌಲಭ್ಯಗಳು, ಪಾಠ ಪ್ರವಚನಗಳು, ಮೂಲಭೂತ ಸೌಕರ್ಯಗಳು, ಪ್ರಯೋಗಾಲಯಗಳು, ಕ್ರೀಡಾ ಸವಲತ್ತುಗಳು, ಸಾಂಸ್ಕೃತಿಕ ಚಟುವಟಿಕೆಗಳು, ಕ್ಯಾಂಪಸ್ ನೇಮಕಾತಿ, ಕ್ಯಾಂಟೀನ್ ಸೌಲಭ್ಯ, ಹಾಸ್ಟೆಲ್ ಇವೇ ಮುಂತಾದ ಹತ್ತು ಹಲವು ಸೌಲಭ್ಯಗಳ ಬಗ್ಗೆ ಕೂಲಂಕುಶವಾಗಿ ಪರಿಶೀಲಿಸಿ ಈ ಮಾನ್ಯತೆಯನ್ನು ನೀಡಲಾಗಿದೆ.
ಮೂರು ಮಂದಿ ತಜ್ಞರನ್ನೊಳಗೊಂಡ ರಾಷ್ಟ್ರೀಯ ಮಾನ್ಯತಾ ಮಂಡಳಿಯ ತಂಡವು ಜೂನ್ 4 ರಂದು ಕಾಲೇಜಿಗೆ ಭೇಟಿ ನೀಡಿ ಪರಿಶೀಲನೆಯನ್ನು ನಡೆಸಿ ಮೂರು ವರ್ಷಗಳ ಅವಧಿಗೆ ಅಂದರೆ 30.6.2025 ರವರೆಗೆ ಮಾನ್ಯತೆಯನ್ನು ನವೀಕರಿಸಿ ಆದೇಶವನ್ನು ನೀಡಿದೆ. ಕಂಪ್ಯೂಟರ್ ಸೈನ್ಸ್ ಮತ್ತು ಎಲೆಕ್ಟ್ರಾನಿಕ್ಸ್ ಎಂಡ್ ಕಮ್ಯುನಿಕೇಶನ್ ವಿಭಾಗಗಳ ಮಾನ್ಯತೆಗಾಗಿ ಈಗಾಗಲೇ ಅರ್ಜಿ ಸಲ್ಲಿಸಲಾಗಿದ್ದು, ಶೀಘ್ರದಲ್ಲಿಯೇ ತಜ್ಞರ ತಂಡವು ಪರಿಶೀಲನೆಗಾಗಿ ಕಾಲೇಜಿಗೆ ಭೇಟಿ ನೀಡಲಿದೆ ಎಂದು ಪ್ರಾಂಶುಪಾಲ ಡಾ.ಮಹೇಶ್ ಪ್ರಸನ್ನ.ಕೆ ತಿಳಿಸಿದ್ದಾರೆ.

Related Articles

Back to top button