ವಿವೇಕಾನಂದ ಎಂಜಿನಿಯರಿಂಗ್ ಕಾಲೇಜು – ರನ್ನರ್-ಅಪ್ ಪ್ರಶಸ್ತಿ…
ಪುತ್ತೂರು: ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಆಶ್ರಯದಲ್ಲಿ ನಡೆದ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯ ಮಟ್ಟದ ಮಂಗಳೂರು ವಿಭಾಗದ ಪುರುಷರ ವಾಲಿಬಾಲ್ ಪಂದ್ಯಾಟದಲ್ಲಿ ಅತಿಥೇಯ ವಿವೇಕಾನಂದ ಇಂಜಿನಿಯರಿಂಗ್ ಕಾಲೇಜು ತಂಡವು ರನ್ನರ್-ಅಪ್ ಪ್ರಶಸ್ತಿಯನ್ನು ಗಳಿಸಿಕೊಂಡಿದೆ.
ಮಂಗಳೂರು ವಿಭಾಗದ ವಿವಿಧ ಇಂಜಿನಿಯರಿಂಗ್ ಕಾಲೇಜುಗಳ 18 ತಂಡಗಳು ಈ ಕ್ರೀಡಾಕೂಟದಲ್ಲಿ ಭಾಗವಹಿಸಿದ್ದು, ಫೈನಲ್ ಪಂದ್ಯದಲ್ಲಿ ಮಂಗಳೂರಿನ ಸೈಂಟ್ ಜೋಸೆಫ್ ಇಂಜಿನಿಯರಿಂಗ್ ಕಾಲೇಜು ತಂಡದ ವಿರುದ್ದ ಹೋರಾಡಿ ದ್ವಿತೀಯ ಸ್ಥಾನವನ್ನು ಪಡೆದುಕೊಂಡಿತು.
ಕಾಲೇಜು ಆಡಳಿತ ಮಂಡಳಿಯ ಸಂಚಾಲಕ ಸುಬ್ರಮಣ್ಯ ಭಟ್.ಟಿ.ಎಸ್, ಕೋಶಾಧಿಕಾರಿ ಮುರಳೀಧರ ಭಟ್ ಬಂಗಾರಡ್ಕ, ಪ್ರಾಂಶುಪಾಲ ಡಾ.ಮಹೇಶ್ ಪ್ರಸನ್ನ.ಕೆ ವಿಜೇತರಿಗೆ ಬಹುಮಾನ ವಿತರಿಸಿದರು.
ವಿಜೇತ ತಂಡಗಳು ಎಐಟಿ ಚಿಕ್ಕಮಗಳೂರಿನಲ್ಲಿ ನಡೆಯುವ ರಾಜ್ಯಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಭಾಗವಹಿಸುವುದಕ್ಕೆ ಅರ್ಹತೆಯನ್ನು ಗಳಿಸಿಕೊಂಡಿವೆ.
ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ತಂಡಕ್ಕೆ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಬಾಲಚಂದ್ರ ಗೌಡ ಭಾರ್ತಿಕುಮೇರು ತರಬೇತಿಯನ್ನು ನೀಡಿದ್ದಾರೆ ಎಂದು ಪ್ರಾಂಶುಪಾಲರು ತಿಳಿಸಿದ್ದಾರೆ.