ಬುಧವಾರ – ದ.ಕ 229 ,ಉಡುಪಿ 263 , ರಾಜ್ಯದಲ್ಲಿ 7883 ಕೊರೊನ ಪಾಸಿಟಿವ್ ಪತ್ತೆ…

ಮಂಗಳೂರು: ಇಂದು( ಬುಧವಾರ) ದ.ಕ ಜಿಲ್ಲೆಯಲ್ಲಿ 229 ,ಉಡುಪಿ ಜಿಲ್ಲೆಯಲ್ಲಿ 263 ಕೊರೊನ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದೆ.
ದ.ಕ ಜಿಲ್ಲೆಯಲ್ಲಿ ಬುಧವಾರ ಹೊಸದಾಗಿ 229 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 7825 ಕ್ಕೆ ಏರಿಕೆಯಾಗಿದೆ.ಇಂದು 7 ಮಂದಿ ಕೊರೊನಾಗೆ ಬಲಿಯಾಗಿದ್ದಾರೆ. ಈ ಮೂಲಕ ಸಾವಿನ ಸಂಖ್ಯೆ 244 ಕ್ಕೆ ಏರಿಕೆಯಾಗಿದೆ. ಇಂದು 498 ಮಂದಿ ಡಿಸ್ಚಾರ್ಜ್ ಆಗಿದ್ದಾರೆ. 2349 ಸಕ್ರಿಯ ಪ್ರಕರಣಗಳಿವೆ.

ಉಡುಪಿ ಜಿಲ್ಲೆಯಲ್ಲಿ ಬುಧವಾರ 263 ಹೊಸ ಕೋವಿಡ್ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 6766ಕ್ಕೆ ಏರಿಕೆಯಾಗಿದೆ. ಜಿಲ್ಲೆಯಲ್ಲಿ ಪ್ರಾಥಮಿಕ ಸಂಪರ್ಕದಿಂದ 97 ಮಂದಿಯಲ್ಲಿ ಸೋಂಕು ದೃಢಪಟ್ಟಿದೆ. 34 ಐಎಲ್ಐ ಪ್ರಕರಣಗಳು ಪತ್ತೆಯಾಗಿದ್ದು, ಅಂತರಾಜ್ಯ ಪ್ರಯಾಣದಿಂದ ನಾಲ್ವರಲ್ಲಿ ಸೋಂಕು ಪತ್ತೆಯಾಗಿದೆ. 128 ಮಂದಿಯ ಸೋಂಕಿನ ಮೂಲ ಪತ್ತೆ ಹಚ್ಚಲಾಗುತ್ತಿದೆ. ಬುಧವಾರದಂದು 198 ಮಂದಿ ಗುಣಮುಖರಾಗಿ ಬಿಡುಗಡೆ ಆಗಿದ್ದಾರೆ.

ಇನ್ನು ರಾಜ್ಯದಲ್ಲಿ ಇಂದು 7,883 ಕೊರೋನಾ ಸೋಂಕು ಪತ್ತೆಯಾಗಿದ್ದು ಒಟ್ಟಾರೆ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 1,96,494ಕ್ಕೆ ಏರಿಕೆಯಾಗಿದೆ.ರಾಜ್ಯದಲ್ಲಿ ಇಂದು 113 ಮಂದಿ ಮೃತಪಟ್ಟಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಸಾವಿನ ಸಂಖ್ಯೆ 3,510ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಇಂದು 7,034 ಮಂದಿ ಗುಣಮುಖರಾಗಿದ್ದಾರೆ.

IMG 20200812 WA0028 206x300

Related Articles

Leave a Reply

Your email address will not be published. Required fields are marked *