ಬುಧವಾರ – ದ.ಕ 34 ಹಾಗೂ ರಾಜ್ಯದಲ್ಲಿ 1279 ಕೊರೊನ ಪಾಸಿಟಿವ್ ಪತ್ತೆ…

ಮಂಗಳೂರು: ಇಂದು (ಬುಧವಾರ ) ದ.ಕ ಜಿಲ್ಲೆಯಲ್ಲಿ 34 ಹಾಗೂ ರಾಜ್ಯದಲ್ಲಿ 1279 ಕೊರೊನ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದೆ.

ದ.ಕ ಜಿಲ್ಲೆಯಲ್ಲಿ ಇಂದು 34 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 32213 ಕ್ಕೆ ಏರಿಕೆಯಾಗಿದೆ. ಇಂದು ಇಬ್ಬರು ಕೊರೋನ ಸೋಂಕಿಗೆ ಬಲಿಯಾಗಿದ್ದಾರೆ. ಜಿಲ್ಲೆಯಲ್ಲಿ ಈವರೆಗೆ ಕೊರೋನಾ ಸೋಂಕಿಗೆ ಒಟ್ಟು 726 ಮಂದಿ ಬಲಿಯಾಗಿದ್ದಾರೆ.ಇಂದು 81 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.

ರಾಜ್ಯದಲ್ಲಿ ಇಂದು 1279 ಮಂದಿಗೆ ಕೊರೋನ ಪಾಸಿಟಿವ್ ಪತ್ತೆಯಾಗಿವೆ. ಇದರೊಂದಿಗೆ ಸೋಂಕಿತರ ಸಂಖ್ಯೆ 8,96,563ಕ್ಕೆ ಏರಿಕೆಯಾಗಿದೆ. ಕಳೆದ 24 ಗಂಟೆಯಲ್ಲಿ ರಾಜ್ಯದಲ್ಲಿ ಕೊರೋನಾ ಸೋಂಕಿನಿಂದ 20 ಮಂದಿ ಸಾವನ್ನಪ್ಪಿದ್ದಾರೆ. ಒಟ್ಟಾರೆ ರಾಜ್ಯದಲ್ಲಿ ಸೋಂಕಿನಿಂದ 11,900 ಮಂದಿ ಬಲಿಯಾಗಿದ್ದಾರೆ.ರಾಜ್ಯದಲ್ಲಿ ಇಂದು 3,218 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 8,59,588 ಏರಿಕೆಯಾಗಿದೆ. ಇನ್ನು 23,056 ಸಕ್ರಿಯ ಪ್ರಕರಣಗಳಿವೆ.

Sponsors

Related Articles

Leave a Reply

Your email address will not be published. Required fields are marked *

Back to top button