ಬುಧವಾರ – ದ.ಕ 70 ಹಾಗೂ ರಾಜ್ಯದಲ್ಲಿ 3377 ಕೊರೊನ ಪಾಸಿಟಿವ್ ಪತ್ತೆ…

ಮಂಗಳೂರು: ಇಂದು (ಬುಧವಾರ ) ದ.ಕ ಜಿಲ್ಲೆಯಲ್ಲಿ 70 ಹಾಗೂ ರಾಜ್ಯದಲ್ಲಿ 3377 ಕೊರೊನ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದೆ.

ದ.ಕ ಜಿಲ್ಲೆಯಲ್ಲಿ ಇಂದು 70 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 30585 ಕ್ಕೆ ಏರಿಕೆಯಾಗಿದೆ. ಇಂದು ಒಬ್ಬರು ಕೊರೊನಾಗೆ ಬಲಿಯಾಗಿದ್ದಾರೆ. ಜಿಲ್ಲೆಯಲ್ಲಿ ಕೊರೋನಾ ಸೋಂಕಿಗೆ ಒಟ್ಟು 681 ಮಂದಿ ಬಲಿಯಾಗಿದ್ದಾರೆ.ಇಂದು 414 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.1342 ಸಕ್ರಿಯ ಪ್ರಕರಣಗಳಿವೆ.

ರಾಜ್ಯದಲ್ಲಿ ಇಂದು 3377 ಮಂದಿಗೆ ಕೊರೋನ ಪಾಸಿಟಿವ್ ದೃಢಪಟ್ಟಿದ್ದು,ಇದರೊಂದಿಗೆ ಸೋಂಕಿತರ ಸಂಖ್ಯೆ 8,35,773ಕ್ಕೆ ಏರಿಕೆಯಾಗಿದೆ.ರಾಜ್ಯದಲ್ಲಿ ಕೊರೋನಾ ವೈರಸ್ ನಿಂದಾಗಿ ಕಳೆದ 24 ಗಂಟೆಯಲ್ಲಿ 34 ಮಂದಿ ಬಲಿಯಾಗಿದ್ದಾರೆ. ಇದರೊಂದಿಗೆ ರಾಜ್ಯದಲ್ಲಿ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 11,281ಕ್ಕೆ ಏರಿಕೆಯಾಗಿದೆ. ಇಂದು 8,045 ಮಂದಿ ಆಸ್ಪತ್ಪೆಯಿಂದ ಡಿಸ್ಚಾರ್ಜ್ ಆಗಿದ್ದು, ಗುಣಮುಖರಾದವರ ಸಂಖ್ಯೆ 7,88,780ಕ್ಕೆ ಏರಿಕೆಯಾಗಿದೆ. 35,693 ಮಂದಿ ನಿಗದಿತ ಕೊವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Sponsors

Related Articles

Leave a Reply

Your email address will not be published. Required fields are marked *

Back to top button