ಬುಧವಾರ – ದ.ಕ. 73, ಉಡುಪಿ 53 ಹಾಗೂ ರಾಜ್ಯದಲ್ಲಿ 3176 ಕೊರೊನ ಪಾಸಿಟಿವ್ ಪತ್ತೆ…

ಮಂಗಳೂರು: ಇಂದು(ಬುಧವಾರ) ದ.ಕ. ಜಿಲ್ಲೆಯಲ್ಲಿ 73, ಉಡುಪಿಯಲ್ಲಿ 53 ರಾಜ್ಯದಲ್ಲಿ 3176 ಮಂದಿಯಲ್ಲಿ ಕೊರೊನ ಪಾಸಿಟಿವ್ ಪತ್ತೆಯಾಗಿದೆ.
ದ.ಕ.ಜಿಲ್ಲೆಯಲ್ಲಿ 104 ಮಂದಿ ಇಂದು ಸೋಂಕು ಮುಕ್ತರಾಗಿದ್ದಾರೆ. ಜಿಲ್ಲೆಯಲ್ಲಿ ಇಲ್ಲಿಯ ತನಕ 1089 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ. 1379 ಮಂದಿ ಸದ್ಯ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.ಜಿಲ್ಲೆಯಲ್ಲಿ ಇಂದು ನಾಲ್ವರು ಸೋಂಕಿನಿಂದಾಗಿ ಮೃತಪಟ್ಟಿದ್ದಾರೆ.ಸುಳ್ಯ ತಾಲೂಕಿನ 60 ವರ್ಷದ ಮಹಿಳೆ ಸೋಂಕಿನಿಂದ ಮೃತಪಟ್ಟಿದ್ದಾರೆ. ಮೃತರು ಡಯಾಬಿಟಿಸ್ ನಿಂದ ಬಳಲುತ್ತಿದ್ದರು ಎಂದು ತಿಳಿದುಬಂದಿದೆ. ಬಂಟ್ವಾಳ ತಾಲೂಕಿನ 73 ವರ್ಷದ ವ್ಯಕ್ತಿ ಕೊರೊನಾದಿಂದ ಮೃತಪಟ್ಟಿದ್ದಾರೆ. ಅವರು ನ್ಯುಮೋನಿಯಾದಿಂದಾಗಿ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಬಂಟ್ವಾಳ ಮೂಲದ 70 ವರ್ಷದ ವ್ಯಕ್ತಿ ಸೋಂಕಿನಿಂದ ಮೃತಪಟ್ಟಿದ್ದು, ಇವರು ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದರು. ಬಂಟ್ವಾಳ ಮೂಲದ 68 ವರ್ಷದ ಮಹಿಳೆ ಮೃತಪಟ್ಟಿದ್ದು, ಅವರು ಡಯಾಬಿಟಿಸ್ ನಿಂದ ಬಳಲುತ್ತಿದ್ದರು ಎಂದು ತಿಳಿದುಬಂದಿದೆ.
ಉಡುಪಿ ಜಿಲ್ಲೆಯಲ್ಲಿ ಬುಧವಾರ ಮತ್ತೆ 53 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. ಆ ಮೂಲಕ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 1786ಕ್ಕೆ ಏರಿಕೆಯಾಗಿದೆ.
ಇನ್ನು ಇಂದು ಬೆಂಗಳೂರು ನಗರವೊಂದರಲ್ಲೆ ಅತಿ ಹೆಚ್ಚು ಅಂದರೆ 1975 ಪ್ರಕರಣಗಳು ವರದಿಯಾಗಿದ್ದು, ರಾಜ್ಯದಲ್ಲಿ ಒಟ್ಟು 3176 ಮಂದಿಗೆ ಪಾಸಿಟಿವ್ ದೃಢಪಟ್ಟಿದೆ. ಇದರಿಂದ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 47,253ಕ್ಕೇರಿಕೆಯಾಗಿದೆ.ಕೊರೋನಾ ವೈರಸ್ ನಿಂದಾಗಿ ಕಳೆದ 24 ಗಂಟೆಯಲ್ಲಿ ಬೆಂಗಳೂರಿನಲ್ಲಿ 61 ಸೋಂಕಿತರು ಸೇರಿದಂತೆ ರಾಜ್ಯದಲ್ಲಿ ಒಟ್ಟು 87 ಮಂದಿ ಸಾವನ್ನಪ್ಪಿದ್ದಾರೆ.

Sponsors

Related Articles

Leave a Reply

Your email address will not be published. Required fields are marked *

Back to top button