ಯೆನೆಪೋಯ ಇಂಜಿನಿಯರಿಂಗ್ ಕಾಲೇಜು – ಉದ್ಯಮಶೀಲತೆ ಅರಿವು ಕಾರ್ಯಾಗಾರ…
ಮೂಡುಬಿದ್ರಿ: ಇಲ್ಲಿನ ಯೆನೆಪೋಯ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಲ್ಲಿ ಮೂರು ದಿನಗಳ ಉದ್ಯಮಶೀಲತೆ ಅರಿವು ಶಿಬಿರ ಅ. 25 ರಂದು ಉದ್ಘಾಟನೆಗೊಂಡಿತು.
ಕಾಲೇಜಿನ ಮೆಕ್ಯಾನಿಕಲ್ ಇಂಜಿನಿಯರಿಂಗ್ ವಿಭಾಗ ಮತ್ತು ಉದ್ಯಮಶೀಲತೆ ಅಭಿವೃದ್ಧಿ ವಿಭಾಗಗಳು ಭಾರತ ಸರ್ಕಾರದ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ರಾಷ್ಟ್ರೀಯ ವಿಜ್ಞಾನ ಮತ್ತು ತಂತ್ರಜ್ಞಾನ, ಉದ್ಯಮಶೀಲತೆ ಅಭಿವೃದ್ಧಿ ಮಂಡಳಿಯ ಸಹಯೋಗದೊಂದಿಗೆ ಈ ಶಿಬಿರವನ್ನು ಆಯೋಜಿಸಲಾಗಿತ್ತು.
ಮಂಗಳೂರಿನ ನಾಯಕ್ಸ್ ರೋಲಿಂಗ್ ಶಟರ್ಸ್ ಅಂಡ್ ಇಂಜಿನಿಯರಿಂಗ್ ವರ್ಕ್ಸ್ ಇದರ ಆಡಳಿತ ಪಾಲುದಾರರಾದ ಅನಿಲ್ ಜಿ ನಾಯಕ್ ಮುಖ್ಯ ಅತಿಥಿ ಹಾಗೂ ಸಂಪನ್ಮೂಲ ವ್ಯಕ್ತಿಗಳಾಗಿ ಪಾಲ್ಗೊಂಡಿದ್ದರು.
ಪ್ರಾಂಶುಪಾಲ ಡಾ.ಆರ್.ಜಿ. ಡಿಸೋಜಾ ಅಧ್ಯಕ್ಷತೆ ವಹಿಸಿ, ಶುಭ ಹಾರೈಸಿದರು. ವಿಭಾಗ ಮುಖ್ಯಸ್ಥ ಡಾ. ಸತೀಶ ಎನ್, ಉದ್ಯಮಶೀಲತೆ ಅಭಿವೃದ್ಧಿ ವಿಭಾಗದ ಸಂಯೋಜಕ ಪ್ರೊ.ರಾಜ್ ಕಿರಣ್ ಶೆಟ್ಟಿ ಉಪಸ್ಥಿತರಿದ್ದರು. ವಿಭಾಗದ ಎಲ್ಲಾ ಉಪನ್ಯಾಸಕರು, ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ವಿದ್ಯಾರ್ಥಿ ರೋಶನ್ ಸ್ವಾಗತಿಸಿದರು.ಕೃತಿಕ್ ಶೆಟ್ಟಿ ಅತಿಥಿ ಪರಿಚಯ ಮಾಡಿದರು. ಯೋಗೀಶ್ ವಂದಿಸಿದರು. ಕಾತ್ಯಾಯಿನಿ ಕಾರ್ಯಕ್ರಮ ನಿರೂಪಿಸಿದರು.