ಯೆನೆಪೋಯ ಇಂಜಿನಿಯರಿಂಗ್ ಕಾಲೇಜು – ಎಲೆಕ್ಟ್ರಾನಿಕ್ಸ್ ಇಂಜಿನಿಯರಿಂಗ್ ವಿಭಾಗದ ವತಿಯಿಂದ ವೆಬಿನಾರ್…
ಮೂಡುಬಿದ್ರಿ: ಇಲ್ಲಿನ ಯೆನೆಪೋಯ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯೂನಿಕೇಷನ್ ಇಂಜಿನಿಯರಿಂಗ್ ವಿಭಾಗದ ವತಿಯಿಂದ ” VLSI – ಕ್ರಿಯೇಟ್ ಎ ನ್ಯೂ ಡೈರೆಕ್ಷನ್ ಇನ್ ಯುವರ್ ಕೆರಿಯರ್ ” ಎಂಬ ವಿಷಯದಲ್ಲಿ ಅ. 23 ರಂದು ವೆಬಿನಾರ್ ನ್ನು ಆಯೋಜಿಸಲಾಗಿತ್ತು.
ಬೆಂಗಳೂರಿನ ಅಲಿಫ್ ಸೆಮಿಕಂಡಕ್ಟರ್ಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಕಂಪೆನಿಯ ಸೀನಿಯರ್ ವೆರಿಫಿಕೇಷನ್ ಇಂಜಿನಿಯರ್ ಆಗಿರುವ ಶ್ರೀಮತಿ ನಿಶಾಂತಿ .ಜಿ ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿದ್ದರು. VLSI ತಂತ್ರಜ್ಞಾನದ ವಿಕಸನ, ಭವಿಷ್ಯದ ತಾಂತ್ರಿಕ ಬದಲಾವಣೆಗಳು ಹಾಗೂ ಉದ್ಯೋಗಾವಕಾಶಗಳ ಬಗ್ಗೆ ಅವರು ಮಾಹಿತಿ ನೀಡಿದರು.
ಪ್ರಾಂಶುಪಾಲ ಡಾ.ಆರ್.ಜಿ. ಡಿಸೋಜಾ, ಕ್ಯಾಂಪಸ್ ಆಡಳಿತಾಧಿಕಾರಿ ಮೊಹಮ್ಮದ್ ಶಾಹಿದ್ ಉಪಸ್ಥಿತರಿದ್ದರು. ವಿಭಾಗ ಮುಖ್ಯಸ್ಥ ಪ್ರೊ.ಗಂಗಾಧರ, ವಿಭಾಗದ ಎಲ್ಲಾ ಉಪನ್ಯಾಸಕರು, ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ವಿದ್ಯಾರ್ಥಿನಿ ಅಫ್ರಾ ಕಾರ್ಯಕ್ರಮ ನಿರೂಪಿಸಿದರು. ಕಾಲೇಜಿನ ISTE ವಿದ್ಯಾರ್ಥಿ ಘಟಕದ ಸಹಯೋಗದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿತ್ತು.