ಯೆನೆಪೋಯ ತಾಂತ್ರಿಕ ಮಹಾವಿದ್ಯಾಲಯ- ರಾಷ್ಟ್ರೀಯ ಸೇವಾ ಯೋಜನಾ ಘಟಕದ ವಾರ್ಷಿಕ ವಿಶೇಷ ಶಿಬಿರ…

ಮೂಡುಬಿದಿರೆ :ಯೆನೆಪೋಯ ತಾಂತ್ರಿಕ ಮಹಾವಿದ್ಯಾಲಯ ಇಲ್ಲಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ ವಾರ್ಷಿಕ ವಿಶೇಷ ಶಿಬಿರ ಜೂ. 17 ರಿಂದ ಜೂ. 23 ರವರೆಗೆ ತೋಡಾರಿನ ದ. ಕ. ಜಿ.ಪಂ.ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಸಲಾಯಿತು.
ಶಾಲಾ ಮುಖ್ಯೋಪಾಧ್ಯಾಯಿನಿ ಶ್ರೀಮತಿ ನಂದಿನಿ ಬಾಯಿ ದೀಪ ಬೆಳಗಿಸುವುದರ ಮೂಲಕ ಶಿಬಿರವನ್ನು ಉದ್ಘಾಟಿಸಿದರು ಹಾಗೂ ರಾಷ್ಟ್ರೀಯ ಸೇವಾ ಯೋಜನೆ ವಿದ್ಯಾರ್ಥಿಗಳಲ್ಲಿ ಸುತ್ತಲ ಪರಿಸರ ಮತ್ತು ಜನರ ನಡವಳಿಕೆಗಳ ಪರಿಚಯ ಮಾಡಿ ಕೊಡುತ್ತದೆ ಎಂದರು.
ಉದ್ಘಾಟನಾ ಸಮಾರಂಭದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಡಾ. ಆರ್. ಜಿ ಡಿ ‘ಸೋಜ ವಹಿಸಿ, ಎಲ್ಲಾ ಶಿಬಿರಾರ್ಥಿಗಳಿಗೆ ಜೀವನದ ಮೌಲ್ಯ, ಆಚಾರ, ನಡವಳಿಕೆ ಮತ್ತು ಹೊಂದಾಣಿಕೆಯನ್ನು ಅರಿತುಕೊಳ್ಳಲು ಸಾಧ್ಯ ಎಂದು ಹೇಳಿದರು.
ವೇದಿಕೆಯಲ್ಲಿ ಅತಿಥಿಗಳಾಗಿ ಕಾಲೇಜಿನ ಕ್ಯಾಂಪಸ್ ಆಡಳಿತಾಧಿಕಾರಿ ಮೊಹಮ್ಮದ್ ಬಿ ಶಾಹಿದ್, ವಲೇರಿಯನ್ ಕುಟಿನ, ಅಧ್ಯಕ್ಷರು ಗ್ರಾಮ ಪಂಚಾಯತ್ ಇರುವೈಲು , ಪ್ರವೀಣ್ ಶೆಟ್ಟಿ, ಸದಸ್ಯರು ಗ್ರಾಮ ಪಂಚಾಯತಿ, ಇರುವೈಲು, ಸುನಿಲ್ ಕುಮಾರ್ , ಅಧ್ಯಕ್ಷರು SDMC ತೋಡಾರು ಮತ್ತು ಎನ್ ಎಸ್ ಎಸ್ ನ ಕಾರ್ಯಕ್ರಮ ಸಂಯೋಜನಾಧಿಕಾರಿ ಪ್ರೊ. ಶ್ರೀನಿವಾಸ್ ಉಪಸ್ಥಿತರಿದ್ದರು. 70 ಶಿಬಿರಾರ್ಥಿಗಳು ಭಾಗವಹಿಸಿದರು. ಶಿಬಿರಾರ್ಥಿ ಸುಶ್ಮಿತಾ ಕಾರ್ಯಕ್ರಮ ನಿರೂಪಿಸಿದರು.

Sponsors

Related Articles

Back to top button