ಸುದ್ದಿ

ಯೆನೆಪೋಯ ತಾಂತ್ರಿಕ ಮಹಾವಿದ್ಯಾಲಯ : YENSPLASH -2K22 ಉದ್ಘಾಟನೆ…

ಮೂಡುಬಿದ್ರಿ: ಯೆನೆಪೋಯ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಎರಡು ದಿನಗಳ ಕಾಲ ನಡೆಯಲಿರುವ ತಾಂತ್ರಿಕ ಮತ್ತು ಸಾಂಸ್ಕೃತಿಕ ಹಬ್ಬ YENSPLASH -2K22 ಇದರ ಉದ್ಘಾಟನೆ ಜು. 2 ರಂದು ನಡೆಯಿತು.
ಕಾಲೇಜಿನ ಪ್ರಾಂಶುಪಾಲ ಡಾ.ಆರ್.ಜಿ. ಡಿಸೋಜಾ ಹಾಗೂ ಅತಿಥಿಗಳಾಗಿ ಭಾಗವಹಿಸಿದ್ದ ತುಳು ಸಿನಿಮಾ ನಟ ಅರ್ಜುನ್ ಕಾಪಿಕಾಡ್ ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅರ್ಜುನ್ ಕಾಪಿಕಾಡ್ ಅವರು ಎರಡು ದಿನಗಳ ಕಾರ್ಯಕ್ರಮಕ್ಕೆ ಶುಭಹಾರೈಸಿದರು ಹಾಗೂ ತಮ್ಮ ಹೊಸ ಸಿನಿಮಾ ‘ಅಬತರ’ ಕ್ಕೆ ಎಲ್ಲರ ಪ್ರೋತ್ಸಾಹವನ್ನು ಆಶಿಸಿದರು.
ಪ್ರಾಂಶುಪಾಲ ಡಾ.ಆರ್.ಜಿ. ಡಿಸೋಜಾ ಅವರು ಸಾಂಸ್ಕೃತಿಕ ಕಾರ್ಯಕ್ರಮಗಳು ಕೋಮು ಸೌಹಾರ್ದತೆಯನ್ನು ಕಾಪಾಡಲು ಸಹಕಾರಿಯಾಗುತ್ತದೆ ಎಂದರಲ್ಲದೆ ಎರಡು ದಿನಗಳ ಕಾಲ ನಡೆಯಲಿರುವ ಈ ತಾಂತ್ರಿಕ ಮತ್ತು ಸಾಂಸ್ಕೃತಿಕ ಹಬ್ಬ ಕಾರ್ಯಕ್ರಮ ವಿದ್ಯಾರ್ಥಿಗಳಲ್ಲಿ ಹುದುಗಿರುವ ಪ್ರತಿಭೆಯನ್ನು ಅನಾವರಣಗೊಳಿಸಲಿದೆ ಎಂದರು.
ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ಅಧಿಕಾರಿ ಪ್ರೊ. ದೀಕ್ಷಾ, ‘ಅಬತರ’ ಸಿನಿಮಾ ತಂಡದ ಸದಸ್ಯರು ವೇದಿಕೆಯಲ್ಲಿ ಉಪಸ್ಥಿತರಿದ್ದರು. ಪ್ರೊ. ಕಾವ್ಯ ಕಾರ್ಯಕ್ರಮ ನಿರೂಪಿಸಿದರು.

Advertisement

Related Articles

Back to top button