ಯೆನೆಪೋಯ ಇಂಜಿನಿಯರಿಂಗ್ ಕಾಲೇಜು – ‘ಪೈಥಾನ್ ಪ್ರೋಗ್ರಾಮಿಂಗ್ ಫ಼ಾರ್ ಬಿಗಿನರ್ಸ್’ ಕಾರ್ಯಾಗಾರ….
ಮೂಡುಬಿದ್ರಿ: ಇಲ್ಲಿನ ಯೆನೆಪೋಯ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಯಲ್ಲಿ ‘ಪೈಥಾನ್ ಪ್ರೋಗ್ರಾಮಿಂಗ್ ಫ಼ಾರ್ ಬಿಗಿನರ್ಸ್’ಎಂಬ ವಿಷಯದಲ್ಲಿ ಕಾರ್ಯಾಗಾರ ಫೆ.19 ರಂದು ನಡೆಯಿತು.
ಇಂಡಿಯನ್ ಸೊಸೈಟಿ ಫಾರ್ ಟೆಕ್ನಿಕಲ್ ಎಜುಕೇಶನ್ (ಐಎಸ್‌ಟಿಇ) ಮತ್ತು ಕಾಲೇಜಿನ ಕಂಪ್ಯೂಟರ್ ಸೊಸೈಟಿ ಆಫ್ ಇಂಡಿಯಾ (ಸಿಎಸ್‌ಐ) ಸಹಯೋಗದೊಂದಿಗೆ ಕಂಪ್ಯೂಟರ್ ಸೈನ್ಸ್ ಮತ್ತು ಮಾಹಿತಿ ವಿಜ್ಞಾನ ಎಂಜಿನಿಯರಿಂಗ್ ವಿಭಾಗಗಳ ವತಿಯಿಂದ ಕಾರ್ಯಾಗಾರ ಏರ್ಪಡಿಸಲಾಗಿತ್ತು.
ಮಂಗಳೂರಿನ ಕೆನರಾ ಎಂಜಿನಿಯರಿಂಗ್ ಕಾಲೇಜಿನ ಕಂಪ್ಯೂಟರ್ ಸೈನ್ಸ್ ಮತ್ತು ಎಂಜಿನಿಯರಿಂಗ್ ವಿಭಾಗದ ಸಹಾಯಕ ಪ್ರಾಧ್ಯಾಪಕ ಸಂತೋಷ್ ಕುಮಾರ್ ಡಿಕೆ ಅವರು ಸಂಪನ್ಮೂಲ ವ್ಯಕ್ತಿಯಾಗಿದ್ದರು. ಅವರು ಪೈಥಾನ್ ಯಾಕೆ ಡೆವಲಪರ್‌ಗಳಿಗೆ ಉಪಯುಕ್ತ ಸ್ಕ್ರಿಪ್ಟಿಂಗ್ ಭಾಷೆಯಾಗಿದೆ ಎಂಬುದರ ಕುರಿತು ಒಳನೋಟವನ್ನು ನೀಡಿದರು. ಪೈಥಾನ್ ಪ್ರೋಗ್ರಾಮಿಂಗ್ ನಲ್ಲಿ ಲಿಸ್ಟ್ಸ್, ಟ್ಯುಪಲ್ಸ್ ಮತ್ತು ಲೈಬ್ರರಿ ಗಳ ಬಳಕೆಯೊಂದಿಗೆ ಪೈಥಾನ್ ಅಪ್ಲಿಕೇಶನ್‌ಗಳನ್ನು ಹೇಗೆ ವಿನ್ಯಾಸಗೊಳಿಸುವುದು ಮತ್ತು ಪ್ರೋಗ್ರಾಂ ಮಾಡುವುದು ಎಂಬುದನ್ನು ವಿದ್ಯಾರ್ಥಿಗಳು ಪ್ರಾಯೋಗಿಕವಾಗಿ ಕಲಿತರು.
ಯೆನೆಪೋಯ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ಪ್ರಾಂಶುಪಾಲ ಡಾ.ಆರ್.ಜಿ. ಡಿಸೋಜಾ ದೀಪವನ್ನು ಬೆಳಗಿಸುವ ಮೂಲಕ ಕಾರ್ಯಾಗಾರವನ್ನು ಉದ್ಘಾಟಿಸಿ, ಶುಭ ಹಾರೈಸಿದರು. ಹಲೀಮಾ ರಾಫ್ಥಾನ್ ಅತಿಥಿಗಳನ್ನು ಸ್ವಾಗತಿಸಿದರು. ಗೌತಮಿ ಎಸ್ ಕುಂದರ್ ಅವರು ಸಂಪನ್ಮೂಲ ವ್ಯಕ್ತಿಯನ್ನು ಸಭೆಗೆ ಪರಿಚಯಿಸಿದರು. ಅಬ್ದುಲ್ ಸಮೀರ್ ಕೃತಜ್ಞತೆ ಸಲ್ಲಿಸಿದರು. ಮಹಿನ್ ಆರಿಫ್ ಕಾರ್ಯಕ್ರಮ ನಿರೂಪಿಸಿದರು. ಕಾರ್ಯಾಗಾರದಲ್ಲಿ 2 ನೇ ವರ್ಷದ ಕಂಪ್ಯೂಟರ್ ಸೈನ್ಸ್ ಮತ್ತು ಮಾಹಿತಿ ವಿಜ್ಞಾನ ಎಂಜಿನಿಯರಿಂಗ್ ವಿಭಾಗಗಳ ವಿದ್ಯಾರ್ಥಿಗಳೊಂದಿಗೆ ಎರಡೂ ವಿಭಾಗಗಳ ಮುಖ್ಯಸ್ಥರು, ಬೋಧಕ ಸಿಬ್ಬಂದಿ ವರ್ಗದವರು ಭಾಗವಹಿಸಿದ್ದರು.