ಯೆನೆಪೋಯ ತಾಂತ್ರಿಕ ಮಹಾವಿದ್ಯಾಲಯ – ವಿಶ್ವ ಪ್ರಕೃತಿ ಸಂರಕ್ಷಣಾ ದಿನಾಚರಣೆ…

ಮೂಡುಬಿದ್ರೆ: ಯೆನೆಪೋಯ ತಾಂತ್ರಿಕ ಮಹಾವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನಾ ಘಟಕ ಹಾಗೂ ಇಕೋ-ಕ್ಲಬ್ ಆಶ್ರಯದಲ್ಲಿ ಜು. 28 ರಂದು ವಿಶ್ವ ಪ್ರಕೃತಿ ಸಂರಕ್ಷಣಾ ದಿನವನ್ನು ಆಚರಿಸಲಾಯಿತು.
ಈ ಸಂದರ್ಭದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಡಾ.ಆರ್ ಜಿ ಡಿಸೋಜಾ ಅವರು ಮಿಯಾವಾಕಿ ಅರಣ್ಯ ಯೋಜನೆಯ ಕುರಿತು ಉಪನ್ಯಾಸವನ್ನು ನೀಡಿದರು.
ಕಾರ್ಯಕ್ರಮದಲ್ಲಿ ಕ್ಯಾಂಪಸ್ ಆಡಳಿತಾಧಿಕಾರಿ ಮಹಮ್ಮದ್ ಶಾಹಿದ್, ಎನ್‌ಎಸ್‌ಎಸ್ ಕಾರ್ಯಕ್ರಮ ಅಧಿಕಾರಿ ಪ್ರೊ.ಶ್ರೀನಿವಾಸ್, ಅಧ್ಯಾಪಕರು ಹಾಗೂ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.
ಯೆನೆಪೋಯ ತಾಂತ್ರಿಕ ಮಹಾವಿದ್ಯಾಲಯದ ಮಿಯಾವಾಕಿ ಫಾರೆಸ್ಟ್ ಪ್ರಾಜೆಕ್ಟ್ ಜಾಗದಲ್ಲಿ ಅಧ್ಯಾಪಕರು ಮತ್ತು ವಿದ್ಯಾರ್ಥಿಗಳು ಸುಮಾರು 100 ಸಸಿಗಳನ್ನು ನೆಡುವುದರ ಮೂಲಕ ವಿಶ್ವ ಪ್ರಕೃತಿ ಸಂರಕ್ಷಣಾ ದಿನವನ್ನು ಆಚರಿಸಿದರು.

Sponsors

Related Articles

Back to top button