ವಿವೇಕಾನಂದ ಎಂಜಿನಿಯರಿಂಗ್ ಕಾಲೇಜು – ಆಂತರಿಕ ದೂರು ಸಮಿತಿಯ ಆಶ್ರಯದಲ್ಲಿ ಸಂವಿಧಾನ ದಿನಾಚರಣೆ…

ಪುತ್ತೂರು: ಇತರ ದೇಶಗಳಿಗೆ ಹೋಲಿಸಿದರೆ ನಮ್ಮ ದೇಶದ ಮಹಿಳಾ ಮತ್ತು ಮಕ್ಕಳ ಹಕ್ಕುಗಳ ವ್ಯಾಖ್ಯಾನವು ಅತ್ಯುತ್ತಮವಾಗಿದೆ. ಆದರೆ ಪ್ರಸಕ್ತ ಸನ್ನಿವೇಶಕ್ಕೆ ತಕ್ಕಂತೆ ಅದಕ್ಕೆ ಕೆಲವು ಮಾರ್ಪಾಡುಗಳನ್ನು ಮಾಡುವ ಆವಶ್ಯಕತೆ ಇದೆ ಎಂದು ಬೆಂಗಳೂರಿನ ಮಹಿಳಾ ಮತ್ತು ಮಕ್ಕಳ ಹಕ್ಕುಗಳ ಕಾರ್ಯಕರ್ತೆ ಕೆ.ಎಸ್.ಲಲಿತಾ ಹೇಳಿದರು
ಅವರು ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಕಾಲೇಜು ಆಂತರಿಕ ದೂರು ಸಮಿತಿಯ ಆಶ್ರಯದಲ್ಲಿ ಸಂವಿಧಾನ ದಿನಾಚರಣೆಯ ಅಂಗವಾಗಿ ಶ್ರೀರಾಮ ಸಭಾ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಹಿಳಾ ಮತ್ತು ಮಕ್ಕಳ ಹಕ್ಕುಗಳ ಬಗ್ಗೆ ಮಾತಾಡಿದರು.
ಕುಟುಂಬ ಅಥವಾ ಸಮಾಜದಲ್ಲಿ ಏನಾದರೂ ಚ್ಯುತಿಯುಂಟಾದಾಗ ತಮ್ಮ ಹಕ್ಕನ್ನು ಯಾವುದೇ ಸಂದರ್ಭದಲ್ಲಿ ಪಡೆದುಕೊಳ್ಳುವುದಕ್ಕೆ ಹಿಂಜರಿಯಬಾರದು. ತಮ್ಮ ಸುತ್ತಮುತ್ತ ಇರುವ ಸಂತ್ರಸ್ತರನ್ನು ಮಹಿಳಾ ಮತ್ತು ಶಿಶುಪಾಲನಾ ಇಲಾಖೆಯ ಸುಪರ್ದಿಗೆ ಒಪ್ಪಿಸುವುದರಿಂದ ಹೆಚ್ಚಿನ ಅನಾಹುತಗಳನ್ನು ತಡೆಯಬಹುದು ಎಂದು ಅವರು ಹೇಳಿದರು.
ಕಾಲೇಜಿನ ಮಹಿಳಾ ಸಿಬ್ಬಂದಿಗಳು ಮತ್ತು ವಿದ್ಯಾರ್ಥಿನಿಯರು ಈ ಕಾರ್ಯಕ್ರಮದಲ್ಲ್ಲಿ ಭಾಗವಹಿಸಿದರು.
ಕಾಲೇಜು ಆಂತರಿಕ ದೂರು ಸಮಿತಿಯ ಅಧ್ಯಕ್ಷೆ ಡಾ.ಸೌಮ್ಯ.ಎನ್.ಜೆ ಸ್ವಾಗತಿಸಿ ಪ್ರಸ್ತಾವನೆಗೈದರು. ಸಂಯೋಜಕಿ ಪ್ರೊ.ರೂಪಾ.ಜಿ.ಕೆ ವಂದಿಸಿದರು. ಪ್ರೊ.ನಿಶಾ.ಜಿ.ಆರ್ ಕಾರ್ಯಕ್ರಮ ನಿರ್ವಹಿಸಿದರು.

Sponsors

Related Articles

Back to top button